ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿದ್ದು,ಪರಿಸರ ಪ್ರವಾಸೋಧ್ಯಮಕ್ಕೆ ಚಾಮರಾಜನಗರ ಉತ್ತಮ, ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ನಗರ ಬಹಳ ಹಿಂದೆ ಉಳಿದಿದೆ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗುತ್ತದೆ ಎಂದು ಬಿಂಬಿಸಿದರು, ಆದರೆ ನಾನು ಮುಖ್ಯಮಂತ್ರಿಯಾಗಿಯೇ ಹತ್ತಕ್ಕೂ ಹೆಚ್ಚು ಬಾರಿ ಜಿಲ್ಲೆಗೆ ಬಂದಿದ್ದೇನೆ, ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದು ಮಾರ್ಮಿಕವಾಗಿ ನುಡಿದರು.
ನೀವು ನನ್ನ ಕುರ್ಚಿ ಅಲುಗಾಡಿಸುತ್ತಲೇ ಇರಿ, ನನ್ನ ಕುರ್ಚಿ ಗಟ್ಟಿ ಆಗುತ್ತಲೇ ಇರುತ್ತೆ ಎಂದು ಬಿಜೆಪಿ-ಜೆಡಿಎಸ್ ನವರಿಗೆ ಸಿದ್ದರಾಮಯ್ಯ ಟಾಂಗ್ ನೀಡಿದರು.
ಯಾರು ಏನೆ ಷಡ್ಯಂತ್ರ ಮಾಡಿದರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದಲ್ಲಿದ್ದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರುವೆ ಎಂದು ದೃಢವಾಗಿ ಸಿಎಂ ಹೇಳಿದರು.