ತಾಂಡವಪುರ: ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಡಿ. 21 22 23 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಿ ಎಂದು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾ ಪಂ ಅಧ್ಯಕ್ಷೆ ನಾಗಮ್ಮನವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಕಾಶ್, ಸರ್ಕಾರದ ಸೂಚನೆಯಂತೆ ಪ್ರತಿಯೊಂದು ಮಗುವಿಗೂ ಪೋಲಿಯೋ ರಸಿಕೆ ದೊರಕಬೇಕು ಆ ದಿಕ್ಕಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಲು ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಕರೆ ತಂದು ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮವಹಿಸಿ ಎಂದು ಸೂಚನೆ ನೀಡಿದರು.
ಅಲ್ಲದೆ ಸರ್ಕಾರದ ಸೂಚನೆಯಂತೆ ಆಯಾಯ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳನ್ನು ಈ ಪೋಲಿಯೋ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಅವರಿಂದ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕಾರ ನೀಡಿ ಎಂದು ಹೇಳಿದರು.
ಸಭೆಯಲ್ಲಿ ಕಾರ್ಯದರ್ಶಿ ಕೆಕೆ ಮರಯ್ಯ, ಲೆಕ್ಕ ಸಹಾಯಕರಾದ ಪುಟ್ಟರಾಜು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತರು ಹಾಗೂ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.
ತಾಂಡವಪುರ ಗ್ರಾ ಪಂ ವ್ಯಾಪ್ತಿಯಲ್ಲಿ ಡಿ.21ರಿಂದ ಪೋಲಿಯೋ ಕಾರ್ಯಕ್ರಮ