ಪೌರಕಾರ್ಮಿಕರೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

Spread the love

ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಪೌರಕಾರ್ಮಿಕರ ಜತೆ ಯೋಗ‌ ದಿನಾಚರಣೆ ಹಮ್ಮಿಕೊಳ್ಳಲಾಯಿತು.

ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಉದ್ಯಾನವನದಲ್ಲಿ ಪೌರಕಾರ್ಮಿಕರೊಂದಿಗೆ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಯಿತು.

ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಪುನೀತ್ ಜಿ ಅವರು ಪೌರ ಕಾರ್ಮಿಕರಿಗೆ ಯೋಗಾಭ್ಯಾಸ ಹೇಳಿಕೊಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುನೀತ್ ಜಿ ಕೂಡ್ಲೂರು, ಯೋಗಾಭ್ಯಾಸದಿಂದ ನಮ್ಮ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಸ್ವಚ್ಚತಾ ಸೇನಾನಿಗಳಾಗಿ ಪ್ರತಿನಿತ್ಯ ದುಡಿಯುವ ಕೈಗಳು ನಿಮ್ಮದು, ನಿಮ್ಮ ಆರೋಗ್ಯ ಬಹಳ ಮುಖ್ಯ, ಯೋಗಾಭ್ಯಾಸ ಹಾಗೂ ಆಯುರ್ವೇದದ ಸಹಾಯದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಹೇಳಿದರು.

ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಪರಮೇಶ್ವರ್ ಮಾತನಾಡಿ ಭಾರತಿಯ ಯೋಗ ಪದ್ಧತಿಯು ಇಂದು ವಿಶ್ವವ್ಯಾಪಿ ಹರಡಿರುವುದು ನಮ್ಮ ಹೆಮ್ಮೆ ಎಂದು ತಿಳಿಸಿದರು.

ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಪಂಚಾಯಿತಿಯ ನೌಕರರಿಗೆ ನಿತ್ಯ ಯೋಗ ಮಾಡಲು ತಿಳಿಸಿದ್ದಾರೆ.

ಈ‌ ವೇಳೆ ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೆ.ಆರ್. ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ನಾಗಭೂಷಣಾಚಾರ್, ಬಾಲಸುಬ್ರಹ್ಮಣ್ಯಂ ಸೇರಿದಂತೆ ಹಲವು ಗಣ್ಯರು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.