ಬೆಂಗಳೂರು: ಈ ವರ್ಷ ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ ಅವಳ ಹೆಜ್ಜೆ ಕಿರುಚಿತ್ರೋತ್ಸವದ ಮೊದಲ ಆವೃತ್ತಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, 2026 ರ ಕಿರುಚಿತ್ರೋತ್ಸವಕ್ಕೆ ತಯಾರಿ ನಡೆದಿದೆ.
ಈ ಬಾರಿ ಮಹಿಳಾ ಸಬಲೀಕರಣಕ್ಕೆ ಸಂಬಂಧಪಟ್ಟ ಕಥಾವಸ್ತು ಇದ್ದು, ಮಹಿಳೆಯರು ನಿರ್ದೇಶಿಸಿದ ಕನ್ನಡ ಕಿರುಚಿತ್ರಗಳ ಸ್ಪರ್ಧೆಯನ್ನು ಮತ್ತೊಮ್ಮೆ ಏರ್ಪಡಿಸಿದ್ದೇವೆ ಎಂದು ಗುಬ್ಬಿವಾಣಿ ಟ್ರಸ್ಟ್ ಮಹಿಳಾ ಸಬಲೀಕರಣ ವಿಭಾಗವಾದ ಅವಳ ಹೆಜ್ಜೆಯ ನಿರ್ದೇಶಕಿ ಶಾಂತಲಾ ದಾಮ್ಲೆ ತಿಳಿಸಿದ್ದಾರೆ.
ಅತ್ಯುತ್ತಮ ಕಿರುಚಿತ್ರಕ್ಕೆ ಅವಳ ಹೆಜ್ಜೆ ಪ್ರಶಸ್ತಿಯಾಗಿ 1,00,000 ನಗದು ಬಹುಮಾನ ಮತ್ತು ಹಲವಾರು ವಿಶೇಷ ವರ್ಗಗಳಲ್ಲಿ ತಲಾ 10,000 ನಗದು ಬಹುಮಾನ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಿಳೆಯರ ಅನುಭವ, ದೃಷ್ಟಿಕೋನಗಳಿಗೆ ವೇದಿಕೆ ನೀಡುವುದು ಮತ್ತು ಕನ್ನಡ ನಿರ್ದೇಶಕಿಯರನ್ನು ಪ್ರೋತ್ಸಾಹಿಸುವುದು ಈ ಚಿತ್ರೋತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
2025 ರ ನವಂಬರ್ 30 ರೊಳಗೆ ಅರ್ಜಿ ಸಲ್ಲಿಸಿದರೆ ಪ್ರವೇಶ ಶುಲ್ಕವಿರುವುದಿಲ್ಲ ಎಂದು ಶಾಂತಲಾ ದಾಮ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.