ಮೈಸೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ವತಿಯಿಂದ 101 ತೆಂಗಿನ ಕಾಯಿ ಈಡುಗಾಯಿ ಒಡೆಯಲಾಯಿತು.
ಸೋಮವಾರ ಬೆಳಿಗ್ಗೆ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಸಂಘದ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ನೇತೃತ್ವದಲ್ಲಿ 101 ತೆಂಗಿನ ಕಾಯಿ ಈಡುಗಾಯಿ ಒಡೆದು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ತೇಜೇಶ್ ಲೋಕೇಶ್ ಗೌಡ ಅವರು, ಡಿ ಕೆ ಶಿವಕುಮಾರ್ ಅವರು ಪಕ್ಷಕ್ಕಾಗಿ ತಮ್ಮ ತನು ಮನ ಧನವನ್ನು ಅರ್ಪಿಸಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದರಲ್ಲಿ ಬಹಳ ಶ್ರಮ ವಹಿಸಿದ್ದಾರೆ. ಆದ್ದರಿಂದ ಕಾಂಗ್ರಸ್ ಹೈ ಕಮಾಂಡ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಈ ಕೂಡಲೇ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಅವರು ವಲಸಿಗರಾಗಿ ಕಾಂಗ್ರೆಸ್ ಗೆ ಬಂದು ಡಿ ಕೆ ಶಿವಕುಮಾರ್ ಅವರ ಬೆಂಬಲದಿಂದಲೇ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಈಗ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಟ್ಟು ತಮ್ಮ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ವೇಳೆ ಬೋಗಾದಿ ಸಿದ್ದೇಗೌಡ, ಸಿಂದುವಳ್ಳಿ ಶಿವಕುಮಾರ್, ವರಕೂಡು ಕೃಷ್ಣೇಗೌಡ, ಪ್ರಭಾಕರ್ , ಗಿರೀಶ್ , ಹನುಮಂತಯ್ಯ, ನೇಹಾ, ಎಳನೀರು ರಾಮಣ್ಣ, ಹೊನ್ನೇಗೌಡ , ಜೋತಿ, ಮಂಜುಳಾ, ಸುಜಾತಾ, ಶಿವರಾಂ , ಕೃಷ್ಣಪ್ಪ , ಸುಬ್ಬೇಗೌಡ , ದರ್ಶನ್ ಗೌಡ, ಶಿವರಾಜ್, ಕುಮಾರ್, ರವೀಶ್, ಗಣೇಶ್ ಪ್ರಸಾದ್, ನಾಗರಾಜ್ ಸೇರಿದಂತೆ ಅನೇಕ ಡಿಕೆಶಿ ಅಭಿಮಾನಿಗಳು ಹಾಜರಿದ್ದರು.
