ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ T 20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಜಯಗಳಿಸಲೆಂದು ಮೈಸೂರಿನ 101 ಗಣಪತಿ ದೇವಸ್ಥಾನದಲ್ಲಿ 101 ತೆಂಗಿನ ಕಾಯಿ ಈಡುಗಾಯಿ ಹೊಡೆಯಲಾಯಿತು.
ನಂತರ 101 ಗಣಪತಿಗೆ
ವಿಶೇಷ ಪೂಜೆ ಸಲ್ಲಿಸಿ, ಭಾರತ ಕ್ರಿಕೆಟ್ ತಂಡದ ಗೆಲುವಿಗೆ ಪ್ರಾರ್ಥಿಸಲಾಯಿತು.
ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಗೋವಿಂದೇ ಗೌಡ, ಪ್ರಭುಶಂಕರ, ಪ್ರಭಾಕರ್, ಶಿವಲಿಂಗಯ್ಯ, ನೇಹಾ ಸಿಂದುವಳ್ಹಿ ಶಿವಕುಮಾರ್, ತಾಯೂರು ಗಣೇಶ್, ಕುಮಾರ್, ರಘು ಅರಸ್, ಬಸವರಾಜು, ಕೇದಾರ್ ಲೋಕೇಶ್, ಮಹರ್ಷ, ಗಣೇಶ್ ಪ್ರಸಾದ್, ಚಂದ್ರಶೇಖರ್, ರವೀಶ್, ರವಿ ನಾಯಕ್ ಸುಬ್ರಹ್ಮಣ್ಯ ಸೇರಿದಂತೆ ಅನೇಕ ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.
