ಮೈಸೂರು: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ 2024 -25 ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100ಕ್ಕೂ ಹೆಚ್ಚು ಅಂಕ ಗಳಿಸಿದ ಮೈಸೂರು ನಗರದ ವಿದ್ಯಾರ್ಥಿಗಳಿಗೆ ಪುರಸ್ಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆ ಮೂಲಕ ವಿದ್ಯಾರ್ಥಿಗಳಲ್ಲಿ ಮಾತೃ ಭಾಷಾಭಿಮಾನ ಬೆಳೆಸಲು
ಕೆ ಎಂ ಪಿ ಕೆ ಟ್ರಸ್ಟ್ ಮುಂದಾಗಿದೆ.
ಈ ಸನ್ಮಾನ ಕಾರ್ಯಕ್ರಮವನ್ನು ಮೇ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ ಎಸ್ ಶ್ರೀವತ್ಸ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ,
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭ ರಾಜ್ಯ ಉಪಾಧ್ಯಕ್ಷ ನವೀನ್ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮಪ್ರಸಾದ್ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.