ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡನಕೊಪ್ಪಲು ಗ್ರಾಮದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ,ಆಕೆಯ ಸ್ಥಿತಿ ಚಿಂತಾಜನಕ ವಾಗಿದೆ.
ಜವರೇಗೌಡನಕೊಪ್ಪಲು ಗ್ರಾಮದ ಅನಿಲ್ ಕುಮಾರ್ ಅವರ ಪತ್ನಿ ಪ್ರಿಯಾಂಕಾ (26)ಸ್ತಿತಿ ಚಿಂತಾಜನಕವಾಗಿದೆ. ಮಕ್ಕಳಾದ ಧೃತಿ (3) ಮತ್ತು ದಿಶಾ (1)ಮೃತಪಟ್ಟಿದ್ದಾರೆ.
ಪ್ರಿಯಾಂಕಾ ಅವರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಿಲ್ ಕುಮಾರ್ ಮತ್ತು ಪ್ರಿಯಾಂಕಾ ದಂಪತಿಗೆ ವಿವಾಹವಾಗಿ ಆರು ವರ್ಷಗಳಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ . ತಿಳಿದುಬಂದಿಲ್ಲ ಎಂದು ಸಾಲಿಗ್ರಾಮ ಠಾಣೆ ಇನ್ಸ್ಪೆಕ್ಟರ್ ಶಶಿಕುಮಾರ್ ತಿಳಿಸಿದ್ದಾರೆ.
ಮಕ್ಕಳ ಮೃತದೇಹಗಳನ್ನು ಕೆ.ಆರ್. ನಗರ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸಾಲಿಗ್ರಾಮ ಮತ್ತು ಕೆ.ಆರ್. ನಗರ ಪೊಲೀಸ್ ತನಿಖೆ ನಡೆಸಿದ್ದಾರೆ.
