ದಾವಣಗೆರೆ: ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ತುಮಕೂರು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ದಾವಣಗೆರೆಯ ಬಿಡಿ ಲೇಔಟ್ನ ಜಮೀರ್ ಖಾನ್ (22), ತುಮಕೂರಿನ ಅಲ್ಲಾಭಕ್ಷಿ ಬಂಧಿತ ಶಂಕಿತರು.
ಇವರಿಬ್ಬರು ಪಾಕ್ನ ಐಎಸ್ಎಸ್ ಫಂಡಿಂಗ್ ಮಾಡುತ್ತಿದ್ದ ಉಗ್ರರಾದ ಶಾಬಾಸ್ ಭುಟ್ಟಿ ಹಾಗೂ ರಾಣಾ ಉನೇನ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು,ಇದನ್ನು ಆಧರಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಶಂಕಿತರು ಸೇರಿ ದುರಂದರ್ ಶೈಲಿಯಲ್ಲಿ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರು.
ದುರಂದರ್ ಸಿನಿಮಾದಲ್ಲಿ ಪಾಕಿಸ್ತಾನದಲ್ಲಿ ಬಾಂಬ್ ಸ್ಟೋಟ ಮಾಡಿದ ರೀತಿ ಭಾರತದಲ್ಲಿ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂದು ಗೊತ್ತಾಗಿದೆ,ಈ ಇಬ್ಬರನ್ನು ಪಾಕಿಸ್ತಾನ್ ಇಂಟಲಿಜೆನ್ಸ್ ಅಪರೇಟರ್ಸ್ ಗಳಾಗಿ ಉಗ್ರರು ಬಳಕೆ ಮಾಡಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ವಾಟ್ಸಾಪ್, ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಉಗ್ರರ ಸಂಪರ್ಕದಲ್ಲಿದ್ದರು. ದೇಶದಲ್ಲಿ ಸಂಚು ನಡೆಸಲು ಭಾರತದ ಮುಸ್ಲಿಂ ಯುವಕರನ್ನು ಬಳಕೆ ಮಾಡಿಕೊಂಡು ಐಎಸ್ಎಸ್ ಭಯೋತ್ಪಾದಕ ಸಂಘಟನೆ ವಿಸ್ತರಿಸಲು ಪ್ಲ್ಯಾನ್ ಮಾಡಿದ್ದರು.
ಜತೆಗೆ ಇಬ್ಬರು ಯುವಕರಿಗೆ ಉಗ್ರರು ಮುಂಬೈನಲ್ಲಿ ಉದ್ಯಮಿಯೊಬ್ಬನನ್ನು ಮುಗಿಸಲು ಟಾಸ್ಕ್ ನೀಡಿದ್ದರು.ಇದು ಕೈಗೂಡುವ ಮುನ್ನವೇ ಇಬ್ಬರೂ ಶಂಕಿತರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
