ಕೊಳ್ಳೇಗಾಲ: ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷ ಬಿ. ಪುಟ್ಟಸ್ವಾಮಿ ಅವರ ಸಮ್ಮುಖದಲ್ಲಿ 20ಕ್ಕೂ ಹೆಚ್ಚು ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ. ಪುಟ್ಟಸ್ವಾಮಿ ಅವರು, ಯುವಕರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಯುವಶಕ್ತಿಯೇ ದೇಶದ ಪ್ರಗತಿಗೆ ಬಲ, ಯುವಕರು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಜನಸೇವೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಅರಿತು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ವೇಳೆ ನಾಯಕರ ಬೀದಿಯ ಯಜಮಾನರಾ್ ಸುಂದರ್ ನಾಯಕ, ಮುಖಂಡರಾದ ಶ್ರೀನಿವಾಸ್, ಜಯರಾಮ್, ಭಾಗ್ಯರಾಜ್, ಮೂರ್ತಿ, ಶ್ರೀನಿವಾಸ್, ಮನು, ಪರಶಿವ, ರಂಗನಾಥ, ಪುಟ್ಟಸ್ವಾಮಿ, ರವಿಶಂಕರ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನೂತನ ಸದಸ್ಯರನ್ನು ಪಕ್ಷದ ಮುಖಂಡರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಟೌನ್ ಅಧ್ಯಕ್ಷ ಸುರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮಲ್ಲೇಗೌಡರು, ರಾಚಪ್ಪ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
