23ರಂದು ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ

Spread the love

ಮೈಸೂರು: ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿದೆ

ನಗರದ ನಾರಾಯಣ ಶಾಸ್ತಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷೆ ನಾಗಶ್ರೀ ಸುಚೇಂದ್ರ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ,ನಗರ ಪಾಲಿಕೆ ಮಾಜಿ ಸದ್ಯಸೆ ಪ್ರಮೀಳಾ ಭರತ್, ಬಿಜೆಪಿ ಮೈಸೂರು ನಗರ ಉಪಾಧ್ಯಕ್ಷೆ ಹೇಮಾ ನಂದೀಶ್,
ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ನಾಗಶ್ರೀ ಸುಚೇಂದ್ರ ತಿಳಿಸಿದ್ದಾರೆ.