ಮೈಸೂರು: ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಅಗ್ರಹಾರ, ನವಗ್ರಹ ದೇವಸ್ಥಾನದ ಆವರಣದಲ್ಲಿರುವ ಪಾರ್ವತಿ ದೇವಿಗೆ ವಿಶೇಷ ಪೂಜೆ ಅಭಿಷೇಕ ನೆರವೇರಿಸಲಾಯಿತು.
ಮುಂಜಾನೆ ತಾಯಿ ಪಾರ್ವತಿಗೆ ವಿವಿಧ ಅಭಿಷೇಕ ನೆರವೇರಿಸಿ ಪೂಜೆ ಮಾಡಿ ಮಹಾ ಮಂಗಳಾರತಿ ನೈವೇದ್ಯ ನೆರವೇರಿಸಿ ಭಕ್ತದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಎಸ್. ಯೋಗಾನಂದ ಮತ್ತು ಅವರ ಪುತ್ರ ಅಭಿನಂದನ್ ಅವರು ತಾಯಿಗೆ ವಿಶೇಷ ಪೂಜೆ ನೆರವೇರಿಸಿದರು.
ಅಭಿನಂದನ್ ಅವರು ತಾಯಿಗೆ ರೇಷ್ಮೆ ಸೀರೆ ಉಡಿಸಿ, ಆಭರಣ ಧರಿಸಿ ಬಗೆ ಬಗೆಯ ಹೂಗಳಿಂದ ಅಲಂಕರಿಸಿ ಪೂಜಿಸಿದರು. ತಾಯಿ ತ್ರಿಶೂಲ ಧಾರಿಯಾಗಿ ಎಲ್ಲರಿಗೂ ಆಶೀರ್ವಾದ ಮಾಡುತ್ತಿದ್ದಾಳೆ ಭಕ್ತಾದಿಗಳು ಬಂದು ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು.
