ಯಾದಗಿರಿ: ರಾಸಾಯನಿಕ ಸೋರಿಕೆಯಾಗಿ ಮೂರು ಕಾರ್ಮಿಕರು ಉಸಿರು ಗಟ್ಟಿ ದಾರುಣವಾಗಿ ಮೃತಪಟ್ಟ ಘಟನೆ
ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಗುರುಮಿಠಕಲ್ ತಾಲೂಕಿನ
ಕಡೆಚೂರ-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿಲ್ ಲ್ಯಾಬೋರೇಟರೀಸ್ ಪ್ರೈ.ಲಿಮಿಟೆಡ್ ಕೆಮಿಕಲ್ ಫ್ಯಾಕ್ಟರಿಯಲ್ಲಿ
ಈ ಅವಘಡ ಸಂಭವಿಸಿದೆ.
ವಿಕ್ರಂಸಿಂಗ್, ಸಂಜಯಸಿಂಗ್ ಮತ್ತು ಗಣೇಶ ಮೃತಪಟ್ಟ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಲ್ಲಿ ಇಬ್ಬರು ಉತ್ತರ ಭಾರತದವರು, ಒಬ್ಬ ತೆಲಂಗಾಣದವನು ಎಂದು ತಿಳಿದು ಬಂದಿದೆ.
ಗಾಯಗೊಂಡ ಮೂವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ ಪಿ ಪೃಥ್ವಿಕ್ ಶಂಕರ್, ಡಿಸಿ ರಾಹುಲ್ ಪಾಂಡೆ
ಡಿವೈಎಸ್ ಪಿ, ಸೈದಾಪುರ ಸಿಪಿಐ,ಪಿಎಸ್ ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಈ ಕರ್ಖಾನೆ ಬಗ್ಗೆ ಪೊಲೀಸರು ಪರಿಶೀಲಿಸಿದ್ದು,ಎಫ್ಐಆರ್ ದಾಖಲಿಸಿದ್ದಾರೆ ಮಾಲೀಕರೊಂದಿಗೆ ಮಾತನಾಡಲಾಗಿದೆ. ಪೊಲೀಸರು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಕೈಗಾರಿಕೆಗಳ ಬೇಜವಾಬ್ದಾರಿ, ಸುರಕ್ಷತಾ ನಿರ್ಲಕ್ಷ್ಯ ಮತ್ತು ಆಡಳಿತದ ವೈಫಲ್ಯ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಳಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಲ್ಲೆ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ
ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.
