ಹುಲಿಗಳ ಸಾವು;ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ತೇಜಸ್ವಿ ಆಗ್ರಹ

Spread the love

ಮೈಸೂರು: ಮಲೆ ಮಹದೇಶ್ವರ ವನ್ಯ ಜೀವಿಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾದವರಿಗೆ‌ ಗಲ್ಲು ಶಿಕ್ಷೆ ವಿಧಿಸುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಹೂಗ್ಯಂ ವಲಯದ ಮೀಣ್ಯಂ ಸಮೀಪದ ಗಾಜನೂರು ಗಸ್ತ್ ಎಂಬ ಪ್ರದೇಶದಲ್ಲಿ ವಿಷಪ್ರಾಶನ ಮಾಡಿ ರಾಷ್ಟ್ರೀಯ ಪ್ರಾಣಿಯಾದ ಐದು ಹುಲಿಗಳ ಸಾವಿಗೆ ಕಾರಣವಾದ ವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ್ದರ ಪರಿಣಾಮ ಮೂವರನ್ನು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ತೇಜಸ್ವಿ ಹೇಳಿದ್ದಾರೆ.

ಹುಲಿಯನ್ನು ಕೊಂದವರಿಗೆ ನಮ್ಮ ದೇಶದಲ್ಲಿ ಏಳು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬೇಕೆಂದು ಕಾನೂನು ಇದೆ, ಆದರೆ ಐದು ಹುಲಿಗಳ ಸಾವಿಗೆ ಕಾರಣವಾದ ವರಿಗೆ ಗಲ್ಲು ಶಿಕ್ಷೆಗೆ ಒಳಪಡಿಸುವುದು ಸೂಕ್ತ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.