ಮೈಸೂರು: ಮೈಸೂರಿನ ಕುವೆಂಪು ನಗರದಲ್ಲಿರುವ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜು ಪಿಯುಸಿ ಪರೀಕ್ಷೆಯಲ್ಲಿ ಶೇ. 99ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.
ಕಾಲೇಜಿನ ಹರ್ಷಿತ ಕೆ. ಅವರು ಶೇ. 97ರಷ್ಟು ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದರೆ, ಗಗನ ಹನಗುಂದ್ (95.2%), ಕಲಾ (94.78), ಲಿಖಿತ (93%), ಲಕ್ಷ್ಮಿ ವಿ (91.8%), ಸಿಂಚನ ಜಿ (91.8%), ಹರ್ಷಿತಾ ಎನ್(91%), ನೀತುಶ್ರೀ ಎಸ್ (91%) ಮತ್ತು ಬೃಂದಶ್ರೀ ಎಂ ಎಸ್(90%) ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಒಟ್ಟು 14 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ನೂರಕ್ಕೆ ನೂರರಷ್ಟು ಫಲಿತಾಂಶದತ್ತ ಹೆಜ್ಜೆ ಹಾಕಿರುವ ವಿದ್ಯಾರ್ಥಿನಿಯರ ಆಪ್ರತಿಮ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
