ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ಹುತಾತ್ಮ ದಿನ ಆಚರಣೆ

Spread the love

ಮೈಸೂರು: ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನ ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ಹುತಾತ್ಮ ದಿನ ಆಚರಿಸಲಾಯಿತು.

ಮಹಾತ್ಮ ಗಾಂಧಿ ಹುತಾತ್ಮ ದಿನ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷರಾದ ವೈ ಸಿ ರೇವಣ್ಣ ಅವರು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಸಂಘದ ಗೌರವಾಧ್ಯಕ್ಷರಾದ ಯೋಗಾನಂದ, ರವಿ,ನಗರಪಾಲಿಕೆ ಮಾಜಿ ಸದಸ್ಯರಾದ ಪ್ರಮೀಳಾ ಭರತ್, ಹಾಗೂ ಸಂಘದ ಸದಸ್ಯರು ಮತ್ತಿತರರು ಹಾಜರಿದ್ದರು.