ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲೂಕು ಶಂಕರಪುರ ಶ್ರೀ ದುರ್ಗಾ ಟೆಂಪೋ ಚಾಲಕರು ಮತ್ತು ಮಾಲಿಕರ ಸಂಘದ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.
ಸಂಘದ ವಾರ್ಷಿಕೋತ್ಸವ ಸಮಾರಂಭದ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಜೋಸೆಫ್ ಲೋಬೊ ಅವರನ್ನು ಸನ್ಮಾನಿಸಲಾಯಿತು.

ಲೋಬೊ ಅವರುಗೆ ಸನ್ಮಾನ ಪತ್ರ ನೀಡಿ ಸಂಘದವರು ಅಭಿನಂದಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
