ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

Spread the love

ಚನ್ನೈ: ಮಕ್ಕಳಿಗೆ ತಿದ್ದಿ ಬುದ್ದಿ ಹೇಳಬೇಕಾದ ದೇವರ‌ ಸ್ಥಾನದಲ್ಲಿರುವ ಗುರುಗಳೇ ಬಾಲಕಿ ಮೇಲೆ‌ ಅತ್ಯಾಚಾರ ಎಸಗಿದ ಅತ್ಯಂತ ಮೃಗೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆದ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

13 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗಿದ್ದು,ಈ ಸಂಬಂಧ ಮೂವರು ಕಾಮುಕ ಶಿಕ್ಷಕರನ್ನು ಬಂಧಿಸಲಾಗಿದೆ.

ಚಿನ್ನಸ್ವಾಮಿ, ಆರಮುಗಂ, ಪ್ರಕಾಶ್ ಬಂಧಿತ ಆರೋಪಿ ಶಿಕ್ಷಕರು. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದಿರುವುದನ್ನು ಗಮನಿಸಿದ ಮುಖ್ಯ ಶಿಕ್ಷಕಿ ಆಕೆಯ ಮನೆಗೆ ಹೋಗಿ ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಪೋಷಕರು ವಿಷಯ ತಿಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.ಕೂಡಲೇ ಅಧಿಕಾರಿಗಳು ಸಂತ್ರಸ್ತ ಬಾಲಕಿ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು, ಬಾರ್ಕೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ನಂತರ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.