ಕುಣಿದು ಕುಪ್ಪಳಿಸಿದ ಕಾಂಗ್ರೆಸಿಗರು

Spread the love

ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ‌ ವಿಷಯ ತಿಳಿಯುತ್ತಿದ್ದಂತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಂಗ್ರೆಸಿಗರ ಸಂಭ್ರಮ ಹೇಳತೀರದಾಗಿತ್ತು.

ನಗರದ ರಾಮಸ್ವಾಮಿ ವೃತ್ತದಲ್ಲಿ ಡೋಲು ವಾದಕರನ್ನು ಕರೆಸಿ ಅದರ ನಾದಕ್ಕೆ ತಕ್ಕಂತೆ ಕಾರ್ಯಕರ್ತರು ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.

ಮಾಜಿ‌ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ‌ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಅಷ್ಟೇ ಅಲ್ಲಾ ಸ್ವತಹ ಎಂ.ಕೆ.ಸೋಮಶೇಖರ್ ಡೋಲಿನ ತಾಳಕ್ಕೆ ಹೆಜ್ಜೆ ಹಾಕಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಈ ವೇಳೆ ಕಾಂಗ್ರಸಿಗರು ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗುತ್ತ ಸತ್ಯಮೇವ ಜಯತೆ ಎಂದು ವಿಕ್ಟರಿ ಚಿನ್ಹೆ ತೋರಿ ಸಂತಸ ವ್ಯಕ್ತಪಡಿಸಿದರು.ಸತ್ಯಕ್ಕೆ‌ ಸಂದ ಜಯ ಎಂಬ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸಿ ಸಂಭ್ರಮಿಸಿದರು.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಧಾರವಾಡ ಹೈಕೋರ್ಟ್ ಈ‌ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ನಿರಸಕರಿಸಿ ಕೇಸನ್ನು ವಜಾಗೊಳಿಸಿದೆ ಹಾಗಾಗಿ ಕಾಂಗ್ರೆಸ್ ಅಭಿಮಾನಿಗಳು ಸಂತಸಪಟ್ಟಿದ್ದಾರೆ.