ಮೈಸೂರು: ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾ ಕೂಟಗಳಿಂದ ವಿದ್ಯಾರ್ಥಿಗಳ ನಡುವೆ ಸಹೋದರ ಸಂಬಂಧ ಬೆಳೆಯಲಿದೆ,
ಕ್ರೀಡೆಯ ಜತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ರೂಡಿಸಿಕೊಳ್ಳಬೇಕು ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.
ಬರಡನಪುರ ಮಠದ ಶ್ರೀ ಪರಶಿವಮೂರ್ತಿ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ನಾಗರಾಜು, ಮುಖಂಡರಾದ ಹಿನ್ ಕಲ್ ಬಸವರಾಜು, ಎಂ.ಕುಮಾರ್, ನಂದೀಶ್ ಚಾಮುಂಡಯ್ಯ, ಲಾಯರ್ ಮಹೇಶ್ ಸೇರಿದಂತೆ ಹಲವಾರು ಮಂದಿ ಹಾಜರಿದ್ದರು