ಪಿ.ಎಂ.ನರೇಂದ್ರ ಸ್ವಾಮಿ ಅವರಿಗೆಶುಭ ಹಾರೈಕೆ

ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನರೇಂದ್ರಸ್ವಾಮಿ
ಅವರಿಗೆ ನಾಯಕರು ಶುಭ ಹಾರೈಕೆ ಮಾಡಿದರು.

ನೂತನವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಮಳವಳ್ಳಿ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೆಲ ನಾಯಕರು ಭೇಟಿ ಮಾಡಿ ಅಭಿನಂದಿಸಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್ ಹಾಗೂ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಫ್ರಾನ್ಸಿಸ್ ಹೂಗುಚ್ಛ ನೀಡಿ ನರೇಂದ್ರಸ್ವಾಮಿ ಅವರಿಗೆ ಶುಭ ಕೋರಿದರು.