ಟಿ.ನರಸೀಪುರ: ಟಿ.ನರಸೀಪುರದಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಜೆಡಿಎಸ್ ಮುಖಂಡರು ಪುಣ್ಯ ಸ್ನಾನ ಮಾಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ಇಂದು ಟಿ ನರಸೀಪುರ ಕುಂಭಮೇಳದಲ್ಲಿ ಭಾಗವಹಿಸಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಇನ್ನು ಮುಂದೆ ಹೆಚ್ಚಿನ ರೀತಿಯಲ್ಲಿ ಅಧಿಕಾರ ಸಿಗಲಿ ಹಾಗೂ 2028 ನೇ ಇಸವಿಯಲ್ಲಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ ಎಂದು ಮುಖಂಡರು ತಿಳಿಸಿದ್ದಾರೆ.

ಕುಂಬಮೇಳದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬೆಲವತ್ತ ರಾಮಕೃಷ್ಣಗೌಡರು ಹಾಗೂ ನಗರ ಅಧ್ಯಕ್ಷ ಕೆಆರ್ ಮಿಲ್ ಕಾಲೋನಿಯ ಆನಂದ್ ಗೌಡ್ರು ಹಾಗೂ ಪದಾಧಿಕಾರಿಗಳು ಪುಣ್ಯ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.