ಕಾಂಗ್ರೆಸ್ ಸೇರಿದ ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ

Spread the love

ಕೋಲ್ಕತ್ತಾ: ನಾಲ್ಕು ವರ್ಷಗಳ ನಂತರ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೊಲ್ಕತ್ತಾದ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬುಧವಾರ ಅಭಿಜಿತ್ ಮುಖರ್ಜಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು.
ಇಲ್ಲಿಯವರೆಗೂ ಅವರು ತೃಣಮೂಲ ಕಾಂಗ್ರೆಸ್ ನಲ್ಲಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಶ್ಚಿಮ ಬಂಗಾಳ ಉಸ್ತುವಾರಿ ಅಹ್ಮದ್ ಮಿರ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಅಭಿಜಿತ್ ಮುಖರ್ಜಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಸದಸ್ಯತ್ವ ನೀಡಲಾಯಿತು.

ರಾಷ್ಟ್ರ ಹಾಗೂ ರಾಜ್ಯ ನಾಯಕರು ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಎರಡನೇ ಬಾರಿಗೆ ಕಾಂಗ್ರೆಸ್ ಸೇರಿದ್ದೇನೆ. ಕಳೆದ ವರ್ಷ ಜೂನ್ ನಲ್ಲಿಯೇ ಪಕ್ಷ ಸೇರಲು ಬಯಸಿದ್ದೆ. ಆದರೆ, ವಿವಿಧ ರಾಜ್ಯಗಳ ಚುನಾವಣೆಯಿಂದಾಗಿ ಮುಂದೂಡಲ್ಪಟ್ಟಿತ್ತು.

ನನ್ನ ಪಕ್ಷ ಸೇರ್ಪಡೆ ಕಾರ್ಯಕ್ರಮ ಈಗ ನೆರವೇರಿದೆ ಎಂದು ಅಭಿಜಿತ್ ಮುಖರ್ಜಿ
ತಿಳಿಸಿದರು.