ಪ್ರಯಾಗ್ ರಾಜ್: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಕಾರು ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ, 10 ಮಂದಿ ಮೃತಪಟ್ಟಿರುವ ಘಟನೆ ಪ್ರಯಾಗ್ ರಾಜ್ ಸಮೀಪ ನಡೆದಿದೆ.
ಮಹಾ ಕುಂಭಮೇಳಕ್ಕೆ ಛತ್ತೀಸ್ ಗಢದಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ಕಾರು ಮುಂಜಾನೆ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಆದಿತ್ಯನಾಥ್ ಸೂಚಿಸಿದ್ದಾರೆ.