ಶಿಕ್ಷಣದ ಹಕ್ಕು ಕಸಿಯುವ ರಾಜ್ಯ ಸರ್ಕಾರ: ಹೇಮಾ ನಂದೀಶ್

Spread the love

ಮೈಸೂರು: ಶಿಕ್ಷಣ ಮೂಲಭೂತ ಹಕ್ಕು. ಆದರೆ, ರಾಜ್ಯ ಸರ್ಕಾರ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಮೂಲಕ ಈ ಹಕ್ಕನ್ನು ಕಸಿಯುತ್ತಿದೆ ಎಂದು ಬಿಜೆಪಿ ಮೈಸೂರು ನಗರ ಉಪಾಧ್ಯಕ್ಷೆ ಹೇಮಾ ನಂದೀಶ್ ಟೀಕಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು,ರಾಜ್ಯದ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಗಳನ್ನೂ ಆದಾಯದ ಮೂಲ ಮತ್ತು ಒಂದು ಸರಕನ್ನಾಗಿ ನೋಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಪದವೀಧರರಿಗೆ ಯುವ ನಿಧಿ ಘೋಷಿಸಿದ ಸರ್ಕಾರ ಈಗ ಅಂತಹ ಪದವೀಧರರನ್ನು ರೂಪಿಸುವ ವಿಶ್ವವಿದ್ಯಾಲಯಗಳನ್ನೇ ಮುಚ್ಚಲು ಹೊರಟಿದೆ. ರಾಜ್ಯವನ್ನು ಆರ್ಥಿವಾಗಿ ಮಾತ್ರವಲ್ಲದೆ, ಬೌದ್ಧಿಕವಾಗಿ ದಿವಾಳಿಯತ್ತ ಕೊಂಡೊಯ್ಯುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಎಲ್ಲ ಭಾಗದವರಿಗೂ ಉನ್ನತ ಶಿಕ್ಷಣ ಕೈಗೆಟುಕುವಂತೆ ಬಿಜೆಪಿ ಸರ್ಕಾರ ಹತ್ತು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅವುಗಳನ್ನು ಮುಚ್ಚುವ ಮೂಲಕ ಆ ಭಾಗದ ವಿದ್ಯಾರ್ಥಿಗಳಿಗೆ ಶೋಷಣೆ ಮಾಡುತ್ತಿದೆ ಎಂದು ಹೇಮಾನಂದೀಶ್ ಆರೋಪಿಸಿದ್ದಾರೆ.

ರಾಜ್ಯದ ಕರಾವಳಿ ಭದ್ರತೆಗೆ ಬೇಕಿರುವ ಇಂಧನವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ಆಡಳಿತ ವೈಫಲ್ಯದ ನಿದರ್ಶನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.