ವಿದ್ಯಾರ್ಥಿಗಳಲ್ಲಿ ಉತ್ತಮ ನಡವಳಿಕೆ ಇರಲಿ:ಪ್ರಕಾಶ್ ಪ್ರಿಯದರ್ಶನ

Spread the love

ಮೈಸೂರು: ವಿದ್ಯಾರ್ಥಿಗಳು ಶೈಕ್ಷಣಿಕ
ಜೀವನದಲ್ಲಿ ಸಹನೆ, ಉತ್ತಮ ನಡವಳಿಕೆ ಹೊಂದಬೇಕು ಎಂದು ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಸಲಹೆ ನೀಡಿದರು.

ನಗರದ ಎಂ.ಜಿ. ರಸ್ತೆಯಲ್ಲಿರುವ ಸಿ ಎಸ್ ಐ ಹಾರ್ಡಿಕ್ ಬಾಯ್ಸ್ ಹಾಸ್ಟೆಲ್ ವಿದ್ಯಾರ್ಥಿ ಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ 218ನೇ ವಾರದ ಹಣ್ಣುಗಳ ವಿತರಣಾ ಕಾರ್ಯಕ್ರಮದಲ್ಲಿ ಹಣ್ಣು, ಹಂಪಲು, ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿರು.

ವಿದ್ಯಾರ್ಥಿಗಳಲ್ಲಿ ಶಿಸ್ತು ಬಹಳ ಮುಖ್ಯ. ಕಂಪನಿಗಳ ನಿರೀಕ್ಷೆಗೆ ತಕ್ಕಂತೆ ವಿದ್ಯಾರ್ಥಿಗಳು ರೂಪುಗೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹಾಸ್ಟೆಲ್ ನ ದೇವೇಂದ್ರ ರತ್ನ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಭವ್ಯ,ಸುಬ್ರಮಣಿ, ಹಿರಿಯ ಕ್ರೀಡಾಪಟು ಮಹಾದೇವ, ರಾಜೇಶ್ ಕುಮಾರ್,ಶ್ರೀಧರ್, ಗಾಯಕ ಯಶ್ವಂತ್ ಕುಮಾರ್, ದತ್ತ,ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.