ಮುಡಾ ಪ್ರಕರಣ ಕ್ಲೀನ್‌ಚಿಟ್:ಸತ್ಯಕ್ಕೆ ಜಯ ಸಿಕ್ಕಿದೆ-ಡಾ.ಯತೀಂದ್ರ

Spread the love

ಮೈಸೂರು: ಮುಡಾ ಸೈಟ್ ವಿಚಾರವಾಗಿ ನನ್ನ ತಂದೆ ಯಾವುದೇ ಪತ್ರ ಬರೆದಿಲ್ಲ, ನನ್ನ ತಾಯಿ ಪತ್ರ ಬರೆದಿದ್ದಾರೆ. ನನ್ನ ಜಮೀನು ಬದಲಿ ಸೈಟ್ ನೀಡಿ ಎಂದು ಬರೆದಿದ್ದಾರೆ. ಸೈಟ್ ಪಡೆಯುವಲ್ಲಿ ಯಾವುದೇ ಪ್ರಭಾವ ಬಳಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎಲ್ಲರಿಗೂ ಸೈಟ್ ಕೊಟ್ಟಂತೆ ನಮಗೂ ಕೊಟ್ಟಿದ್ದಾರೆ. ನಮ್ಮ ಜಮೀನು ಬಳಸಿಕೊಂಡು ಸೈಟ್ ಕೊಟ್ಟಿದ್ದಾರೆ. ಇದನ್ನೇ ದೊಡ್ಡ ಹಗರಣ ಅಂತ ಬಿಂಬಿಸಿದರು ಬೇಕು ಬೇಕಂತಲೇ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದರು,ಈಗ ಕ್ಲೀನ್ ಚಿಟ್ ಸಿಕ್ಕಿದೆ. ಈವಾಗ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದರು.

ಮುಡಾ ಹಗರಣದಲ್ಲಿ ನನ್ನ ಹೆಸರನ್ನು ಕೂಡ ತಳುಕು ಹಾಕುವ ಯತ್ನ ನಡೆಯಿತು, ನಾನು ಮುಡಾ ಸದಸ್ಯ ಆಗಿದ್ದೆ. ಎಲ್ಲಿಯೂ ಕೂಡ ನಾನು ಏನು ಹೇಳಿಲ್ಲ. ಆರ್ ಟಿಐ ಕಾರ್ಯಕರ್ತರನ್ನ ಮುಂದಿಟ್ಟು ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದರು. ಆದರೆ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ದೂರುದಾರ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟಿಗೆ ಹೋಗಲಿ , ನಾವು ಯಾವುದೇ ತಪ್ಪು ಮಾಡಿಲ್ಲ ಕೋರ್ಟ್ ನಲ್ಲೂ ಕೂಡ ನಮ್ಮ ಪರ ನ್ಯಾಯ ಸಿಗಲಿದೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಉದಯಗಿರಿ ಗಲಾಟೆ ಪ್ರಕರಣ
ಯಾರೋ ಕಿಡಿಗೇಡಿ ವಿವಾದಿತ ಪೋಸ್ಟ್ ಹಾಕಿದ್ದ. ಅದಕ್ಕೆ ಕೆಲವರು ಕಾನೂನು ಕೈಗೆತ್ತಿಕೊಂಡರು,ಸರ್ಕಾರ ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಂಡಿದೆ. ಇದನ್ನು ರಾಜಕೀಯ ಮಾಡಲು ಬಿಜೆಪಿ ಹೊರಟಿತ್ತು.
ನಿನ್ನೆಯ ಹೋರಾಟದಲ್ಲಿ ಜನ ಇರಲಿಲ್ಲ, ಸತ್ಯ ಏನು ಅಂತ ಜನರಿಗೆ ಗೊತ್ತು. ಅದಕ್ಕಾಗಿ ಪ್ರತಿಭಟನೆಯಲ್ಲಿ ಜನ ಇರಲಿಲ್ಲ. ನೆನ್ನೆಯ ಬಿಜೆಪಿ ಪ್ರತಿಭಟನೆ ಯಶಸ್ವಿ ಆಗಿಲ್ಲ ಎಂದು ಟಾಂಗ್ ನೀಡಿದರು ‌

ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್ ನಿಂತಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಯತೀಂದ್ರ ಕಡಕ್ಕಾಗಿಯೇ ಹೇಳಿದರು.