ಮೈಸೂರು: ಸಮಾಜದಲ್ಲಿನ ಮೌಡ್ಯತೆ, ಅಂಧಾನುಕರಣೆ ಹೋಗಲಾಡಿಸಬೇಕಾದರೆ ಪ್ರತಿಯೊಬ್ಬರು ವೈಜ್ಞಾನಿಕ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್.ದಿನೇಶ್ ಸಲಹೆ ನೀಡಿದರು.
ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಿದ ವೇಳೆ ಮಾತನಾಡಿದ ಅವರು ಪ್ರಪಂಚದಲ್ಲಿ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಭಾಷಾ ಶಾಸ್ತ್ರಗಳು ಸಮತೋಲನವಾಗಿ ಬೆಳವಣಿಗೆ ಆದರೆ ಆ ದೇಶ ಅಭಿವೃದ್ಧಿ ಪಥದ ಕಡೆಗೆ ಹೋಗಲು ಸಾಧ್ಯ ಎಂದು ಹೇಳಿದರು.
ವಿಶೇಷ ಉಪನ್ಯಾಸ ಮಾಡಿದ ಭೌತಶಾಸ್ತ್ರ ಉಪನ್ಯಾಸಕರಾದ ಎಂ ಎಸ್ ರಾಮನುಜ ಅವರು ಸರ್. ಸಿ.ವಿ. ರಾಮನ್ ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ತಿಳಿಸಿದರು .
ರಸಾಯನಶಾಸ್ತ್ರ ಉಪನ್ಯಾಸಕ ಎನ್ ದಿನೇಶ್ ಅವರು ವಿಜ್ಞಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ದೇವರಾಜ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಸಿ.ಎನ್ ಪಣಿರಾಜ್, ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಮಂಜುನಾಥ್ , ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣಗೌಡ, ಎಸ್. ಲಿಂಗಣ್ಣ ಸ್ವಾಮಿ ,ರಂಗಸ್ವಾಮಿ ಪ್ರಕಾಶ್ ಎಚ್. ಕೆ ,ಡಾ.ಟಿ.ಕೆ ರವಿ,ಡಾ.ಕೆ.ಮಾಲತಿ ಮತ್ತಿತರ ಉಪನ್ಯಾಸಕರು ಉಪಸಿತರಿದ್ದರು.
