ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಪ್ರಕರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.
ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.
ಮಂಜುಳಾ ರಾಮಗನಟ್ಟಿ ಬಂಧನ ಸೇರಿದಂತೆ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ.
ಘಟಪ್ರಭಾ ಠಾಣೆ ಪೊಲೀಸರು ಕೇವಲ 24ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದು, ಅಪಹರಣವಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ.
ತನಿಖೆ ವೇಳೆ ಕಿಡ್ನ್ಯಾಪ್ನ ಮಾಸ್ಟರ್ ಪ್ಲ್ಯಾನ್ ಮಾಡಿರುವುದು ಕಿಂಗ್ಪಿನ್ ಮಂಜುಳಾ ಎಂಬ ವಿಚಾರ ಗೊತ್ತಾಗಿದೆ. ಮಂಜುಳಾ ಮಗ ಈಶ್ವರ ರಾಮಗನಟ್ಟಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ವಿಚಾರ ಬಹಿರಂಗವಾಗಿದೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48ವರ್ಷ) ಅವರು ಫೆಬ್ರವರಿ 14ರಂದು ರಾತ್ರಿ 11ಗಂಟೆ ಸುಮಾರಿಗೆ ಮನೆಗೆ ಬರುತ್ತಿದ್ಸಾಗ ಅಪಹರಣ ಮಾಡಲಾಗಿತ್ತು. ಮರುದಿನ ಫೆಬ್ರವರಿ 15 ರಂದು ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು ಐದು ಕೋಟಿ ಹಣ ನೀಡಿ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದರು.
ತನಿಖೆ ಸಂದರ್ಭದಲ್ಲಿ ಸಿಕ್ಕ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನ ಪೊಲೀಸರು ಬಂಧಿಸಿದ್ದಾರೆ. ಫಪ