ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೂತನ ನಿರ್ದೇಶಕಿಯಾಗಿ ಕೆ.ಎಂ. ಗಾಯತ್ರಿ ಅವರನ್ನು ಸರ್ಕಾರ ನಿಯೋಜಿಸಿದೆ.
ಇಲಾಖೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಡಾ. ಕೆ.ಧರಣಿದೇವಿ ಮಾಲಗತ್ತಿ ಅವರನ್ನು ದಿಢೀರ್ ವರ್ಗಾವಣೆ ಮಾಡಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇದೇ ವೇಳೆ ಹಿರಿಯ ಐಎಎಸ್ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಕೆ.ಎಂ. ಗಾಯತ್ರಿ ಅವರು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.