ನ್ಯೂಯಾರ್ಕ್: ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಹಾಗೂ ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್ (ಎಫ್‌ಐಎ), ವಿಶ್ವ ಮಹಿಳಾ ದಿನದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಭಾರತ ಮೂಲದ ನಾಲ್ವರು ಸಾಧಕಿಯರನ್ನು ಸನ್ಮಾನಿಸಿ ಗೌರವಿಸಿದೆ.
ಜೆಪಿ ಮಾರ್ಗನ್ ಕಂಪನಿಯ ಸಲಹೆ, ವಿಲೀನ ಹಾಗೂ ಸ್ವಾಧೀನ ಕುರಿತ ಜಾಗತಿಕ ಮುಖ್ಯಸ್ಥೆ ಅನು ಅಯ್ಯಂಗಾರ್, ಎ-ಸೀರಿಸ್ ಮ್ಯಾನೇಜ್‌ಮೆಂಟ್ ಮತ್ತು ಇನ್ವೆಸ್ಟ್‌ಮೆಂಟ್ ಸಿಇಒ ಅಂಜುಲಾ ಆಚಾರ್ಯ, ಎಲ್‌ಡಿಪಿ ವೆಂಚರ್ಸ್ ಸಂಸ್ಥಾಪಕಿ ವೆಂಡಿ ಡೈಮಂಡ್ ಮತ್ತು ಸಿಎನ್‌ಬಿಸಿಯ ನಿರೂಪಕಿ ಸೀಮಾ ಮೋದಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಮುಖ್ಯ ಅತಿಥಿಯಾಗಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ನಪೂರ್ಣ ದೇವಿ ಅವರು, ‘ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಉಭಯ ದೇಶಗಳ ಮಹಿಳೆಯರು ಮುಂಚೂಣಿ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದರು.