ನವದೆಹಲಿ: ಒಂಬತ್ತು ತಿಂಗಳ ನಂತರ ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾನಿ ಸುನೀತಾ ವಿಲಿಯಮ್ಸ್
ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಶುಭ ಕೋರಿದ್ದಾರೆ,ಅಲ್ಲದೆ ಭಾರತ ಭೇಟಿಗೆ ಸುನೀತಾಗೆ ಆಹ್ವಾನ ಕೂಡಾ ನೀಡಿದ್ದಾರೆ.

ಗಗನಯಾನಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ.ವಿಷಯ ತಿಳಿದ ತಕ್ಷಣ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸ್ವಾಗತ, ಭೂಮಿ ನಿಮ್ಮನ್ನು ಮಿಸ್ ಮಾಡಿಕೊಂಡಿತ್ತು. ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿಗಳು ಮತ್ತೊಮ್ಮೆ ಪರಿಶ್ರಮ ಎಂದರೆ ಏನು ಎಂದು ನಮಗೆ ತೋರಿಸಿದ್ದಾರೆ ಎಂದು ಬರೆದಿದ್ದಾರೆ.
ಅವರ ಅಚಲ ದೃಢಸಂಕಲ್ಪವು ಲಕ್ಷಾಂತರ ಜನರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.
ಮಾರ್ಗದರ್ಶಕ ಮತ್ತು ಐಕಾನ್ ಆಗಿರುವ ಸುನೀತಾ ವಿಲಿಯಮ್ಸ್ ತಮ್ಮ ವೃತ್ತಿಜೀವನದುದ್ದಕ್ಕೂ ಈ ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ದಣಿವರಿಯದೆ ಕೆಲಸ ಮಾಡಿದ ಎಲ್ಲರ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.