ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕಿತ್ತು, ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರಿನಲ್ಲಿ ಕಮಿಶನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ.ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್ ಬೆಂಗಳೂರಾಗಿದೆ ಎಂದು ವ್ಯಂಗ್ಯ ವಾಡಿದರು ಅಶೋಕ್.
ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ ಸರ್ಕಾರ-ಅಶೋಕ್ ಟೀಕೆ