ವಾಷಿಂಗ್ಟನ್: ಅಮೆರಿಕದ ಉನ್ನತ ಆರೋಗ್ಯ ಸಂಶೋಧನೆ ಮತ್ತು ಧನಸಹಾಯ ಸಂಸ್ಥೆಗಳಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ನ ನಿರ್ದೇಶಕರಾಗಿ ಭಾರತೀಯ ಮೂಲದ ವಿಜ್ಞಾನಿ ನೇಮಕವಾಗಿದ್ದಾರೆ.
ಭಾರತೀಯ-ಅಮೆರಿಕನ್ ವಿಜ್ಞಾನಿ ಜೈ ಭಟ್ಟಾಚಾರ್ಯ ಅವರ ನೇಮಕವನ್ನು ಅಮೆರಿಕಾ ಸೆನೆಟ್ ದೃಢಪಡಿಸಿದೆ.
ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾನಿಲಯದ ಆರೋಗ್ಯ ನೀತಿಯ ಪ್ರಾಧ್ಯಾಪಕ ಭಟ್ಟಾಚಾರ್ಯ ಅವರು 53-47 ಮತಗಳಿಂದ ನಿರ್ದೇಶಕರಾಗಿ ದೃಢಪಟ್ಟಿದ್ದಾರೆ ಎಂದು ಯುಎಸ್ ಸೆನೆಟ್ನ ಅಧಿಕೃತ ವೆಬ್ಸೈಟ್ ತಿಳಿಸಿದೆ.
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಳೆದ ವರ್ಷ ನವೆಂಬರ್ನಲ್ಲಿ ಭಟ್ಟಾಚಾರ್ಯರನ್ನು 18 ನೇ ಎನ್ಐಎಚ್ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿದ್ದರು.
ಡಾ. ಭಟ್ಟಾಚಾರ್ಯ ಅವರು ರಾಬರ್ಟ್ ಎಫ್ ಕೆನಡಿ ಜೂನಿಯರ್ ಅವರ ಜೊತೆಗೆ ರಾಷ್ಟ್ರದ ವೈದ್ಯಕೀಯ ಸಂಶೋಧನೆಯನ್ನು ನಿರ್ದೇಶಿಸಲು ಮತ್ತು ಆರೋಗ್ಯವನ್ನು ಸುಧಾರಿಸುವ, ಜೀವಗಳನ್ನು ಉಳಿಸುವ ಪ್ರಮುಖ ಆವಿಷ್ಕಾರಗಳನ್ನು ಮಾಡಲು ಕೆಲಸ ಮಾಡುತ್ತಾರೆ ಎಂದು ಟ್ರಂಪ್ ಮಾಹಿತಿ ನೀಡಿದ್ದರು.
ಇದೀಗ ಡಾ. ಭಟ್ಟಾಚಾರ್ಯ ಅವರ ನೇಮಕ ಆವಿಷ್ಕಾರ ಮಾಡಲು ಪ್ರೇರಣೆಯಾಗಿದೆ.