ಅಮೇರಿಕ: ಯುದ್ಧ ಕೊನೆಗೊಳಿಸಲು ಕದನ ವಿರಾಮವನ್ನು ರೂಪಿಸಲು ರಷ್ಯಾ ಮತ್ತು ಉಕ್ರೇನಿಯನ್ ನಾಯಕರು ಹೆಣಗಾಡುತ್ತಿದ್ದರೆ ಇತ್ತ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಇಬ್ಬರನ್ನೂ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಕದನ ವಿರಾಮ ವಿಚಾರದಲ್ಲಿ ನಾವು ಸಾಕಷ್ಟು ಪ್ರಗತಿ ಸಾಧಿಸುತ್ತಿದ್ದೇವೆ ಇಬ್ಬರ ನಡುವೆ ಅಗಾಧ ದ್ವೇಷವಿದೆ ಪುಟಿನ್ ಝೆಲೆನ್ಸ್ಕಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಕ್ಕೆ ಅವರು ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಈಗಾಗಲೇ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸುತ್ತಿರುವ ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ಸೇರಿಸುವುದನ್ನು ಮತ್ತು ಅದರ ತೈಲ ರಫ್ತನ್ನು ದುರ್ಬಲಗೊಳಿಸಲು ಸುಂಕಗಳನ್ನು ಬಳಸುವುದನ್ನು ಪರಿಗಣಿಸುವುದಾಗಿ ಟ್ರಂಪ್ ಹೇಳಿದರು.
ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಝೆಲೆನ್ಸ್ಕಿ ಕಾನೂನು ಬದ್ಧತೆಯನ್ನು ಹೊಂದಿಲ್ಲ ಎಂದು ರಷ್ಯಾ ಅಧ್ಯಕ್ಷ ಪುಟಿನ್ ತಕರಾರು ತೆಗೆದಿದ್ದಾರೆ. ಅಲ್ಲದೆ ಉಕ್ರೇನ್‌ಗೆ ಬಾಹ್ಯ ಆಡಳಿತದ ಅಗತ್ಯವಿದೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.