ದೇಶದ ಜನತೆಗೆ ಡಬಲ್ ಶಾಕ್ ನೀಡಿದ ಕೇಂದ್ರ ಸರ್ಕಾರ

Spread the love

ನವದೆಹಲಿ,ಏ.7: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ದೇಶದ ಜನತೆಗೆ ಡಬಲ್ ಶಾಕ್ ನೀಡಿದೆ. ಪೆಟ್ರೋಲ್ ದರ ಹೆಚ್ಚಿಸಿದ ಕೆಲವೇ ಕ್ಷಣಗಳಲ್ಲಿ ಸಿಲೆಂಡರ್ ದರವನ್ನೂ ಹೆಚ್ಚಿಸಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ.

ಪೆಟ್ರೋಲ್, ಡೀಸೆಲ್ ಸುಂಕ ಹೆಚ್ಚಳ ಮಾಡಿದ ಬೆನ್ನಲ್ಲೇ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿದೆ. ಮಾತ್ರವಲ್ಲ ಉಜ್ವಲ ಯೋಜನೆ ಅಡಿ ಸಿಗುವ ಸಿಲಿಂಡರ್ ದರದಲ್ಲಿಯೂ ಏರಿಕೆಯಾಗಿದೆ.

ಅಡುಗೆ ಅನಿಲ ದರ 50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಉಜ್ವಲ ಯೋಜನೆ ಸಿಲಿಂಡರ್ ದರವನ್ನು ಕೂಡ 50 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಉಜ್ವಲ ಯೋಜನೆ ಅಡಿಯ ಸಿಲಿಂಡರ್ ದರ ಇನ್ಮುಂದೆ 550 ರೂಪಾಯಿ ಆಗಲಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿತ್ತು. ಇದರ ವಿರುದ್ಧ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಇದೇ ಸಂದರ್ಭದಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಲೆಂಡರ್ ದರವನ್ನೂ ಹೆಚ್ಚಳ ಮಾಡಿದೆ.

ಇದರಿಂದಾಗಿ ರಾಜ್ಯ ಸರಕಾರದ ಬೆಲೆ ಏರಿಕೆ ವಿರುದ್ಧ ಈಗಷ್ಟೇ ಜನಾಕ್ರೋಶ ಯಾತ್ರೆ ಆರಂಭಿಸಿದ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ.
ಮುಂದೆ ಏನು ಮಾಡುವರೊ ಕಾದು ನೋಡಬೇಕಿದೆ.

ರಾಜ್ಯ ಬಿಜೆಪಿಗರಿಗೆ ಎರಡೇ‌ ದಾರಿ ಇರೋದು.ಒಂದೋ ಕೇಂದ್ರ ಸರ್ಕಾರದ ಬಳಿ ಹೋಗಿ ಒತ್ತಡ ತಂದು ಬೆಲೆ ಇಳಿಕೆ ಮಾಡಿಸಬೇಕು ಇಲ್ಲಾ ಹೋರಾಟ ಹಿಂಪಡೆಯಬೇಕು.ಮುಂದೆ ಏನು ಮಾಡುವರೊ ಕಾದು ನೋಡಬೇಕಿದೆ.