2027ಕ್ಕೆ ಎತ್ತಿನಹೊಳೆ ಎರಡನೆ ಹಂತದಿಂದ 7 ಜಿಲ್ಲೆಗಳಗೆ ನೀರು: ಸಿಎಂ ಭರವಸೆ

Spread the love

ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಏಳು ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ಕುಡಿಯುವ ನೀರು ತಲುಪುವುದು ಖಂಡಿತಾ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ ಎಂದು ಭರವಸೆ ನೀಡಿದರು.

7 ಜಿಲ್ಲೆಗಳ ಮನಗೆ ಕುಡಿಯುವ ನೀರು ತಲುಪಲಿದೆ,ಜತೆಗೆ ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಆಶ್ವಾಸನೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಜನತೆಗೆ ಸಿದ್ದು ತಿಳಿಹೇಳಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವೆ,ಅಲ್ಲದೆ ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಇದು ಖಂಡಿತ ಎಂದು
ಆಶ್ವಾಸನೆ ನೀಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ವೇಳೆ ಸಿಎಂ ಸೂಚಿಸಿ ದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಮತ್ತು ಐದು ತಾಲ್ಲೂಕುಗಳ ಶಾಸಕರು, ಇತರೆ ಜನಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.