ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ರಾಜಧಾನಿಯಲ್ಲಿ ಘೋರ ದುರಂತ ಸಂಭವಿಸಿದ್ದು,90 ಕ್ಕೂ ಹೆಚ್ವು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಐಕಾನಿಕ್ ನೈಟ್‌ಕ್ಲಬ್‌ನ ಛಾವಣಿ ಕುಸಿದು ಕನಿಷ್ಠ 90 ಸಾವನ್ನಪ್ಪಿದ್ದಾರೆ, 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು.
ಜೆಟ್ ಸೆಟ್ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಜನಪ್ರಿಯ ಗಾಯಕ, ಪ್ರಾಂತೀಯ ಗವರ್ನರ್ ಮತ್ತು ಇಬ್ಬರು ಮಾಜಿ ಮೇಜರ್ ಲೀಗ್‌ನ ಬೇಸ್‌ಬಾಲ್ (Baseball) ಆಟಗಾರರಾದ ಆಕ್ಟೇವಿಯೊ ಡೋಟೆಲ್ ಮತ್ತು ಟೋನಿ ಬ್ಲಾಂಕೊ ಮೃತಪಟ್ಟಿದ್ದಾರೆ.
ಸ್ಯಾಂಟೊ ಡೊಮಿಂಗೊದಲ್ಲಿನ ಒಂದು ಅಂತಸ್ತಿನ ಜೆಟ್ ಸೆಟ್ ನೈಟ್‌ಕ್ಲಬ್‌ನ ಅವಶೇಷಗಳಡಿ ಬದುಕುಳಿದು ಗಾಯಗೊಂಡವರ ರಕ್ಷಣೆಗೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ತುರ್ತು ಕಾರ್ಯಾಚರಣೆಗಳ ನಿರ್ದೇಶಕ ಜುವಾನ್ ಮ್ಯಾನುಯೆಲ್ ಮೆಂಡೆಜ್ ತಿಳಿಸಿದ್ದಾರೆ.

ನೈಟ್‌ಕ್ಲಬ್‌ನ ಛಾವಣಿ ಕುಸಿದು ಸುಮಾರು 12 ಗಂಟೆಗಳ ನಂತರ ರಕ್ಷಣಾ ಸಿಬ್ಬಂದಿಗಳು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳದವರು ಮುರಿದ ಕಾಂಕ್ರೀಟ್ ಬ್ಲಾಕ್‌ಗಳನ್ನು ತೆಗೆದು ಹಾಕುತ್ತಿದ್ದಾರೆ.
ರಕ್ಷಣಾ ಸಿಬ್ಬಂದಿ ಕ್ಲಬ್‌ನಲ್ಲಿನ ಮೂರು ಪ್ರದೇಶಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಮೆಂಡೆಜ್ ಮಾಹಿತಿ ನೀಡಿದ್ದಾರೆ.