ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಸುತ್ತಮುತ್ತ ಶುಕ್ರವಾರ ಸಂಜೆ ಇದ್ದಕ್ಕಿದ್ದಂತೆ ಹವಾಮಾನ ವೈಪರೀತ್ಯದಿಂದಾಗಿ ಭಾರೀ ಬಿರುಗಾಳಿಯಿಂದ ಜನ ತೀವ್ರ ವಾಗಿ ಆತಂಕಗೊಂಡಿದ್ದಾರೆ.
ಹವಾಮಾನ ದಿಢೀರ್ ಬದಲಾವಣೆಯಿಂದ 15ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಜತೆಗೆ ಭಾರೀ ಧೂಳಿನಿಂದಾಗಿ ವಾಹನ ಸವಾರರು ವಾಹನ ಚಲಿಸಲಾರದೆ ತೀವ್ರ ತೊಂದರೆ ಅನುಭವಿಸಿದರು.
ರಾಷ್ಟ್ರ ರಾಜಧಾನಿಯಲ್ಲಿ ಧೂಳು ಮಿಶ್ರಿತ ಬಿರುಗಾಳಿ ಮತ್ತು ಭಾರೀ ಬಿರುಗಾಳಿ ಬೀಸುತ್ತಿದೆ.ರಸ್ತೆಯೇ ಕಾಣಿಸುತ್ತಿಲ್ಲ
ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.
ದೆಹಲಿಯಲ್ಲಿನ ಪ್ರತಿಕೂಲ ಹವಾಮಾನದಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಹಾರಾಟದಲ್ಲಿ ತೊಂದರೆ ಉಂಟಾಗಿದೆ.
ದೆಹಲಿ ಮತ್ತು ಜೈಪುರದಲ್ಲಿ ಧೂಳು ಮಿಶ್ರಿತ ಬಿರುಗಾಳಿ ಬೀಸುತ್ತಿದ್ದು, ಇದು ಟೇಕ್‌ಆಫ್ ಮತ್ತು ಲ್ಯಾಂಡಿಂಗ್‌ಗಳ ಮೇಲೆ ಪರಿಣಾಮ ಬೀರುತ್ತಿದೆ ಮತ್ತು ವಾಯು ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ಇಂಡಿಗೋ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ದೆಹಲಿ ಮತ್ತು ಪಕ್ಕದ ಎನ್ ಸಿ ಆರ್ ಗೆ ಯೆಲ್ಲೋ ಅಲರ್ಟ್ ನೀಡಿದ್ದು ಎಚ್ಚರಿಕೆ ನೀಡಿದೆ.