ಆಂದ್ರಪ್ರದೇಶ: ತಮ್ಮದೇ ಪಕ್ಷದ ನಾಯಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಶಾಸಕ ಕೊನೇಟಿ ಆದಿಮೂಲಂ ಅವರನ್ನು ಅಮಾನತು ಗೊಳಿಸಲಾಗಿದೆ.
ತಮ್ಮದೇ ಪಕ್ಷದ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವೀಡಿಯೊ ವೈರಲ್ ಆದ ಬೆನ್ನಲ್ಲೇ ಆದಿಮೂಲಂ ಮೇಲೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಂಡಿದೆ.
ಕಳೆದ ಜುಲೈನಲ್ಲಿ ತಿರುಪತಿಯ ಹೋಟೆಲ್ನಲ್ಲಿ ತನ್ನ ಮೇಲೆ ಮೂರು ಬಾರಿ ಶಾಸಕ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.
ಕೃತ್ಯ ಬಹಿರಂಗಪಡಿಸಿದರೆ ನನ್ನ ಮತ್ತು ನನ್ನ ಕುಟುಂಬದವರನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಕೂಡಾ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾಳೆ.
ಪ್ರಕರಣ ವೈರಲ್ ಆಗುತ್ತಿದ್ದಂತೆ ರಾಜಕೀಯ ಆರೋಪ, ಪ್ರತ್ಯಾರೋಪಗಳು ಪ್ರಾರಂಭವಾಗಿವೆ.ಆದರೆ ಈವರೆಗೆ ಎಫ್ಐಆರ್ ದಾಖಲಾಗಿಲ್ಲ ಮುಂದೆ ಏನು ಎಂಬುದನ್ನು ಕಾದು ನೋಡಬೇಕಿದೆ.