ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿಎಂ

Spread the love

ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ವೇಳೆ ಸಿಎಂ ಮಾತನಾಡಿದರು.

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ಭರವಸೆ ನೀಡಿದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದು ಸಿಎಂ ತಿಳಿಸಿದರು ‌

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.