ಮೈಸೂರು: ಎಲ್ಲಾ ವಿಶ್ವವಿದ್ಯಾಲಯಗಳಿಗೆ ಆರ್ಥಿಕ ಅನುದಾನ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಮೈಸೂರು ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಮಂಡ್ಯ ರಾಜ್ಯ ಅಧ್ಯಕ್ಷ ಬೇಕ್ರಿ ರಮೇಶ್, ರಾಜ್ಯ ಸಂಚಾಲಕ ಬಿ ಶಿವಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.

ಕರ್ನಾಟಕ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಆರ್ಥಿಕ ಅನುದಾನ ನೀಡಬೇಕು, ಬೋಧಕೇತರ ಹುದ್ದೆಗಳ ನೇಮಕಾತಿ ಮಾಡಬೇಕು, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳಿಗೆ ಖಜಾನೆಯಲ್ಲಿ ಹಣ ಇದೆ ಎಂದು ಹೇಳುವ ಸರ್ಕಾರ ಏಕೆ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿರುವ ವಿಶ್ವ ವಿದ್ಯಾಲಯಗಳಿಗೆ ಅನುದಾನ ಕೊಡುವುದಿಲ್ಲ
ಎಂದು ಪ್ರಶ್ನಿಸಿದರು.
ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿ, ಮೂಲಭೂತ ಸೌಕರ್ಯಗಳನ್ನು ಗ್ಯಾರಂಟಿ ಯೋಜನೆಗೆ ಸೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಿ ಜಿಲ್ಕಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು,
ಡಾ ರಾಜಕುಮಾರ್ ಅಭಿಮಾನಿಗಳ ಸಂಘದ ರಾಜ್ಯ ಅಧ್ಯಕ್ಷ ಎಂ.ರಾಮೇಗೌಡ,
ತೇಜೇಶ್ ಲೋಕೇಶ್ ಗೌಡ, ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಮಂಡ್ಯ ಜಿಲ್ಲೆ ಸಂಚಾಲಕ ಸಲ್ಮಾನ್, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಉಪಾಧ್ಯಕ್ಷ ಮಹೇಶ್ ಕುಮಾರ್ ಹೆಚ್ ಎಂ, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯದರ್ಶಿ ಸ್ವಾಮಿ,ಜಿಲ್ಲಾ ಸಮಿತಿ ಸದಸ್ಯರಾದ ಟಗರು ಮಹಾದೇವ, ಟೈಲರ್ ಮಹದೇವು,ವಿಷ್ಣು, ರವಿ ನಂಜನಗೂಡು, ಪುಟ್ಟ ಸ್ವಾಮಿ ಆಟೋ ಹಾಗೂ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.