ನಂಜನಗೂಡಿನಲ್ಲಿ ಪ್ರತ್ಯೇಕ ಅಪಘಾತ: ಇಬ್ಬರು ಸಾ*ವು

Spread the love

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಬೈಕ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದು,ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ (35) ಮೃತಪಟ್ಟಿದ್ದಾರೆ.ಆಕೆಯ ಪತಿ ಮಹೇಶ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಅಪಘಾತ:
ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಕಾರಣ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೋವಿಂದ (34) ಮೃತ ವ್ಯಕ್ತಿ.

ಅತಿ ವೇಗವಾಗಿ ಬಂದು ಗೋವಿಂದ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಕಾರು ಚಾಲಕ ಪರಾರಿಯಾಗಿದ್ದು, ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.