ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಉದಯಗಿರಿಯಲ್ಲಿರುವ
ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ ಹಾಗೂ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಏ. 23ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ನಾಗರಿಕರು ನಿಮ್ಮ ಮನೆಯಲ್ಲಿರುವ ಉಪಯೋಗಿಸಿರುವ ಕಥೆ, ಕಾದಂಬರಿ, ಕವನ, ಪಠ್ಯಪುಸ್ತಕ ಹಾಗೂ ಇನ್ನಿತರೆ
ಪುಸ್ತಕಗಳನ್ನು ನೀಡುವ ಮೂಲಕ ಅರ್ಥಪೂರ್ಣವಾಗಿ ಪುಸ್ತಕ ದಿನ ಆಚರಣೆ ಮಾಡೋಣ ಎಂದು ಮನವಿ ವಿಕ್ರಮ್ ಅಯ್ಯಂಗಾರ್ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ. 9880752727
ಸಂಪರ್ಕಿಸಬಹುದು ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯುಬ್ ಖಾನ್, ಮಾಜಿ ಮೇಯರ್ ಸಂದೇಶ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡಿಕೇರಿ ಗೋಪಾಲ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮತ್ತಿತರರು ಭಾಗವಹಿಸಲಿದ್ದಾರೆ.