ಮೈಸೂರು: ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು
ಎಂದು ನಳಿನ ಕುಮಾರಿ ಸಲಹೆ ನೀಡಿದರು.
ಸಮುಚ್ಚಯದ ವಸತಿ ನಿಲಯದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು,ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒಲವು ತೋರಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ನಟರಾಜ ಪದವಿ ಕಾಲೇಜು ಪ್ರಾಂಶುಪಾಲರಾದ ಡಾಕ್ಟರ್ ಶಾರದಾ ಮಹದೇವಪ್ಪ ಮಹಿಳಾ ಕಾಲೇಜಿನಲ್ಲಿ ಗಣಕಯಂತ್ರ ವಿಭಾಗದ ಮುಖ್ಯಸ್ಥರಾಗಿದ್ದ ನಳಿನ ಕುಮಾರಿ ಡಿ.ಎಂ ಆಗಮಿಸಿದ್ದರು.
ಶಾರದಾ ಮಹದೇವಪ್ಪ ಮಾತನಾಡಿ, ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಹಾಗೂ ಮುಂದೆ ಜೀವನದಲ್ಲಿ ಎದುರಿಸಬಹುದಾದ ಸವಾಲುಗಳು ಹಾಗೂ ಸಮಸ್ಯೆಗಳ ಬಗ್ಗೆ ಮನಮುಟ್ಟುವ ಹಾಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಮತಾ ಸುರೇಶ್ ವಹಿಸಿದ್ದರು.
ಇದೇ ವೇಳೆ ವಿದ್ಯಾರ್ಥಿನಿಯರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನ ಸೂರೆಗೊಂಡಿತು.