ಮೈಸೂರು: ಜಮ್ಮು ಕಾಶ್ಮೀರ ಉಗ್ರರ ದಾಳಿ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಮತ್ತು ಮೃತರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಬೆಳಗಿ ಕೃಷ್ಣರಾಜ ಯುವ ಬಳಗದ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಶೋಕಾಚಾರಣೆ ನಡೆಸಲಾಯಿತು.

ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ಖಂಡಿಸಿ ಕಪ್ಪುಪಟ್ಟಿ ಧರಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಮೇಣದಬತ್ತಿ ಬೆಳಗಿಸಲಾಯಿತು.
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಅತ್ಯಂತ ಪೈಶಾಚಿಕ ಎನಿಸುವಂಥ ಘಟನೆ ನಡೆದಿದ್ದು, 30 ಮಂದಿ ಪ್ರವಾಸಿಗರು ಮೃತಪಟ್ಟಿದ್ದು ಹಲವರಿಗೆ ಗಾಯಗೊಂಡಿದ್ದಾರೆ. ಕರ್ನಾಟಕದ ಶಿವಮೊಗ್ಗದ ಮಂಜುನಾಥ್ ರಾವ್,ಹಾವೇರಿಯ ಪ್ರವಾಸಿಯೊಬ್ಬರು ಸಾವನ್ನಪ್ಪಿದ್ದಾರೆ.

ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮ್ ಪ್ರಸಾದ್, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ರಾಕೇಶ್ ಭಟ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಜಿ ನಾಗರಾಜ್, ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ
ವಿನಯ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರಮೇಶ್ ರಾಮಪ್ಪ, ಅಪೂರ್ವ ಸುರೇಶ್,
ಶ್ರೀಕಾಂತ್ ಕಶ್ಯಪ್, ಟಿ. ಎಸ್ ಅರುಣ್, ಶ್ರೀನಿವಾಸ್ ಪ್ರಸಾದ್,ರವಿಶಂಕರ್, ಕಡಕೋಳ ಶಿವು, ಪಾಂಡು, ಮಹಾನ್ ಶ್ರೇಯಸ್, ರಾಘವೇಂದ್ರ,ಮಂಜುನಾಥ್, ರಾಕೇಶ್, ನಾಗೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.
