ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಚಾಮರಾಜನಗರದಲ್ಲಿ ಹಿಂದೂ ಜಾಗರಣ ವೇದಿಕೆಯವರು ಪಂಜಿನ ಮೆರವಣಿಗೆ ಮಾಡಿ ಭುವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಹೊರಟು ನಗರಸಭೆ ಕಚೇರಿ ರಸ್ತೆ, ನೃಪತುಂಗ ಸರ್ಕಲ್, ಅಗ್ರಹಾರ ಬೀದಿ ಮೂಲಕ ತೆರಳಿ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಉಗ್ರರರನ್ನು ಸಾಕುತ್ತಿರುವ ಪಾಕಿಸ್ತಾನ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಹೇಮಂತ್ ಕುಮಾರ್ ಮಾತನಾಡಿ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಜಾತಿ ಕೇಳಿ ದಾಳಿ ನಡೆಸಿಲ್ಲ, ಅದ್ದರಿಂದ ಹಿಂದೂಗಳು ಜಾತಿ ಭೇದ ಮರೆತು ಒಗ್ಗಟ್ಟಾಗಿರಬೇಕೆಂದು ಕರೆ ನೀಡಿದರು.
ಬಳಿಕ ಮೃತಪಟವರಿಗೆ ಎರಡು ನಿಮಿಷಗಳ ಕಾಲ ಮೌನಾಚಾರಣೆ ಮಾಡಲಾಯಿತು.