ಚಿತ್ರದುರ್ಗ: ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ಒಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಪಕ್ಕದ ಮನೆ ಗೆಳತಿ ಸೈಕಲ್ ಕೊಡಲಿಲ್ಲವೆಂಬ ಕಾರಣದಿಂದ ಮನ ನೊಂದು 11 ವರ್ಷದ ಬಾಲಕಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸದ್ಯ ದುರ್ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗೋಪಾಲ ಮತ್ತು ರುದ್ರಮ್ಮ ದಂಪತಿಯ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.