ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಏ.28 ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯತ್ವ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ.
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ರಾಜ್ಯದ್ಯಂತ ಬ್ರಾಹ್ಮಣ ಸಂಘಟನೆ ಬಲಪಡಿಸಲು ಸದಸ್ಯತ್ವ ಈ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬ ವಿಪ್ರರು ಸದಸ್ಯತ್ವ ಪಡೆಯಬೇಕೆಂದು ಪ್ರಕಟಣೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಮನವಿ ಮಾಡಿದ್ದಾರೆ.
ಬ್ರಾಹ್ಮಣ ಸಮಾಜದ ಬಂಧುಗಳು
ಸದಸ್ಯತ್ವ ಪಡೆಯಲು ಇಚ್ಚಿಸುವವರು ತಮ್ಮ ಆಧಾರ್ ಕಾರ್ಡ್ ಹಾಗೂ 2 ಭಾವಚಿತ್ರಗಳು ಸದಸ್ಯತ್ವ ಶುಲ್ಕ 500ರೂ ನೀಡಿ ಸದಸ್ಯತ್ವ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್. 9880752727 ನಲ್ಲಿ ಸಂಪರ್ಕಿಸಬಹುದು ಎಂದು ವಿಕ್ರಮ ಅಯ್ಯಂಗಾರ್ ತಿಳಿಸಿದ್ದಾರೆ.