ಮಂಡ್ಯ: ಕಬಡ್ಡಿ ಪಂದ್ಯ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಒಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಪಾಪಣ್ಣಚಾರಿ(50) ಮೃತಪಟ್ಟಿದ್ದಾರೆ.
ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಗ್ಯಾಲರಿಯಲ್ಲಿ ಕುಳಿತಿದ್ದರಿಂದ ಈ ಘಟನೆ ನಡೆದಿದೆ.
ಮಕ್ಕಳೂ ಸೇರಿ ಹಲವರು ಗಾಯಗೊಂಡಿದ್ದು
ಮಂಡ್ಯ ಮಿಮ್ಸ್ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.